ಆಗಸ್ಟ್ 28, 29ಕ್ಕೆ ಸಿಇಟಿ ಪರೀಕ್ಷೆ: ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಸಿಇಟಿ ಅಂಕ ಮಾತ್ರ ಪರಿಗಣನೆ – ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ರದ್ದುಪಡಿಸಿರುವುದರಿಂದ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಡಿಸಿಎಂ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು. ಸಿಇಟಿ ಪರೀಕ್ಷೆ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದ ಬಳಿಕ ಇಂದು ಮಾತನಾಡಿದ ಅವರು, ಆಗಸ್ಟ್‌ 28 ಮತ್ತು 29ರಂದು ಸಿಇಟಿ ನಡೆಯಲಿದೆ ಎಂದು ತಿಳಿಸಿದರು. ಸಿಇಟಿ ಪರೀಕ್ಞಾ ಪದ್ಧತಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಪ್ರತಿ ವಿಷಯ 60 … Read more

ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ : ಎಚ್. ಡಿ. ಕುಮಾರಸ್ವಾಮಿ

ಬೆಂಗಳೂರು : ಕೋವಿಡ್‌ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ, ಎಸ್‌ಎಸ್ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ರಾಜ್ಯ ಸರ್ಕಾರದ ಬುದ್ಧಿಭ್ರಮಣೆಯ ನಿರ್ಧಾರ. ಮತಿಗೆಟ್ಟಂತೆ ವರ್ತಿಸುತ್ತಿರುವ ಶಿಕ್ಷಣ ಸಚಿವರ ಐಲು-ಪೈಲು ನಿರ್ಧಾರ ಕಂಡು ರಾಜ್ಯದ ಜನತೆ ಹಾದಿ ಬೀದಿಯಲ್ಲಿ ನಗಾಡುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರ್ಕಾರ ತಕ್ಷಣ ಇಂತಹ ಮತಿ ಹೀನ ನಿರ್ಧಾರದಿಂದ ಹಿಂದೆ ಸರಿಯಬೇಕು. ಪಿಯುಸಿ ಮಕ್ಕಳಿಗೆ ಪರೀಕ್ಷೆ ಇಲ್ಲ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಸೀಮಿತ ವಿಷಯಗಳ … Read more

ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತೀರ್ಮಾನ : ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವೀತಿಯ ಪಿಯು ಪರೀಕ್ಷೆಯ ನಡೆಯುತ್ತಾ,ರದ್ದಾಗುತ್ತಾ.. ಎಂಬ ಕುತೂಹಲಕ್ಕೆ ಕೊನೆಗೆ ತೆರೆ ಬಿದ್ದಿದೆ. ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸದ್ಯಕ್ಕೆ ರದ್ದುಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಘೋಷಣೆ ಮಾಡಿದ್ದಾರೆ. ಆದರೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದು ಮಾಡದೇ ಪರೀಕ್ಷೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರಥಮ ಪಿಯುಸಿ ಮಕ್ಕಳ ಗ್ರೇಡ್ ಆಧರಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡಲಾಗುವುದು ಎಂದಿದ್ದಾರೆ. ಗ್ರೇಡ್ ಬಗ್ಗೆ ಸಮಾಧಾನ ಇಲ್ಲದವರಿಗೆ ಕೋವಿಡ್ ನಂತರ ಪರೀಕ್ಷೆ … Read more

12ನೇ ತರಗತಿ ಪರೀಕ್ಷೆ ರದ್ದುಗೊಳಿಸಿ ಮಕ್ಕಳಿಗೆ ಪಾಸ್ ಮಾಡಬೇಕು : ಸಿಎಂ ಕೇಜ್ರಿವಾಲ್

ನವದೆಹಲಿ: ಕೋವಿಡ್‌ ಪಿಡುಗಿನ ಮಧ್ಯೆ 12ನೇ ತರಗತಿ ಪರೀಕ್ಷೆಗಳನ್ನು ನಡೆಸಬೇಕೇ ಎಂಬ ಕುರಿತಾಗಿ ಜೂನ್ 3ರಂದು ಕೇಂದ್ರ ಸರ್ಕಾರವು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಕೇಜ್ರಿವಾಲ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. 12ನೇ ಪರೀಕ್ಷೆಯ ಬಗ್ಗೆ ಮಕ್ಕಳಿಗೆ ಹಾಗೂ ಪೋಷಕರಿಗೆ ತುಂಬಾ ಚಿಂತೆಯಾಗಿದೆ. ಕೋವಿಡ್ ದಿಂದ ಜನತೆ ಆತಂಕದಲ್ಲಿದ್ದಾರೆ. ಹೀಗಾಗಿ ವ್ಯಾಕ್ಸಿನ್ ಇಲ್ಲದೆ ಪರೀಕ್ಷೆ ನಡೆಸುವುದು ಸೂಕ್ತವಲ್ಲ. ಪರೀಕ್ಷೆ ನಡೆಸಬಾರದು ಎನ್ನುವ ಇಂಗಿತ ವ್ಯಕ್ತವಾಗುತ್ತಿದೆ. ಸಿಬಿಎಸ್‌ಇ … Read more

ಹೊರದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಆದ್ಯತೆಯ ಮೇರೆಗೆ ಶೀಘ್ರವಾಗಿ ಲಸಿಕೆ ನೀಡಬೇಕು: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಬೆಂಗಳೂರು: ಮುಂದಿನ 2-3 ತಿಂಗಳಲ್ಲಿ ಸಾವಿರಾರು ಯುವ ಕನ್ನಡಿಗರು ವಿದ್ಯಾಭ್ಯಾಸಕ್ಕಾಗಿ ಹೊರದೇಶಗಳಿಗೆ ಹೋಗುವವರಿದ್ದಾರೆ. ಹಲವು ದೇಶಗಳು/ವಿಶ್ವವಿದ್ಯಾಲಯಗಳು ಈ ವಿದ್ಯಾರ್ಥಿಗಳು ಆಗಮಿಸುವ ಮುನ್ನ ಕೊರೊನಾ ಲಸಿಕೆ ತೆಗೆದುಕೊಂಡಿರಬೇಕು ಎಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೇರಳ, ಮಹಾರಾಷ್ಟ್ರ ಸೇರಿದಂತೆ ಕೆಲವು ರಾಜ್ಯಗಳಲ್ಲಿ . ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೂಡಲೇ ಗಮನಹರಿಸಿ ಕರ್ನಾಟಕದಲ್ಲಿಯೂ ಆದ್ಯತೆಯ ಮೇರೆಗೆ ಲಸಿಕೆ ನೀಡಿ ಓದುವ ಮಕ್ಕಳಿಗೆ ನೆರವಾಗಬೇಕು … Read more

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಮಾರ್ಟ್ ಫೋನ್ ವಿತರಣೆ: ಶಿಕ್ಷಣ ಸಚಿವ ಸುರೇಶಕುಮಾರ್ ಮಾಹಿತಿ

ಮೈಸೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ‘ಉಚಿತ ಸ್ಮಾರ್ಟ್‌ಫೋನ್’ ವಿತರಣೆ ಮಾಡುವ ಕುರಿತು ಈಗಾಗಲೇ ಸರ್ವೇ ಕಾರ್ಯವನ್ನು ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿಗಳ‌ ಬಡ ವಿದ್ಯಾರ್ಥಿಗಳು ಆನ್‌ಲೈನ್ ಶಿಕ್ಷಣದಿಂದ ವಂಚಿತರಾಗಬಾರದು. ಮುಂದಿನ ಶೈಕ್ಷಣಿಕ ವರ್ಷ ಹೇಗಿರುತ್ತದೋ ಗೊತ್ತಿಲ್ಲ. ಹಳ್ಳಿಯ ಬಡ ಮಕ್ಕಳಿಗೆ ಸ್ಮಾರ್ಟ್ ಫೋನ್ ಖರೀದಿಸುವ ಆರ್ಥಿಕ ಸಾಮರ್ಥ್ಯ ಇಲ್ಲ, ಹೀಗಾಗಿ ಶಿಕ್ಷಣದಿಂದ ವಂಚಿತ ಮಕ್ಕಳಿಗೆ ಬಾಲ್ಯ ವಿವಾಹ ಆಗಬಾರದು. ಶಿಕ್ಷಣ ವಂಚಿತ ಮಕ್ಕಳು ಬಾಲ … Read more

NEET ಪರೀಕ್ಷೆಗೆ ದಿನಾಂಕ ಫಿಕ್ಸ್:

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್ )ಗೆ ದಿನಾಂಕ ನಿಗಧಿಯಾಗಿದ್ದು, ಆಗಸ್ಟ್ 1ರಂದು 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ ಟಿಎ) ಶುಕ್ರವಾರ ಪ್ರಕಟಿಸಿದೆ. ಪರೀಕ್ಷೆ ಕುರಿತು ಸಂಸ್ಥೆ ಪ್ರಕಟಣೆ ಹೊರಡಿಸಿದ್ದು, “ನೀಟ್ (ಯುಜಿ) 2021ನ್ನು ಪೆನ್ ಮತ್ತು ಪೇಪರ್ ಮೋಡ್ ಮೂಲಕ ಹಿಂದಿ ಮತ್ತು ಇಂಗ್ಲಿಷ್ ಸೇರಿದಂತೆ 11 ಭಾಷೆಗಳಲ್ಲಿ ನಡೆಸಲಾಗುವುದು” ಎಂದು ತಿಳಿಸಿದೆ. ಆನ್ಲೈನ್ʼನಲ್ಲಿ ಪರೀಕ್ಷೆ ನಡೆಸಲು ಸರ್ಕಾರ ಚಿಂತನೆ ನಡೆಸಿತ್ತಾದರೂ ಈ ವರ್ಷ ಪೆನ್ … Read more

ಶಾಲೆಗೆ ತೆರಳಿದ ಮೂವರು ವಿದ್ಯಾರ್ಥಿನಿಯರು ನಾಪತ್ತೆ

studentse

ಉತ್ತರ ಪ್ರದೇಶ(02-03-2021):  ಶಹಜಹಾನ್ಪುರದಲ್ಲಿ ಮೂವರು ಅಪ್ರಾಪ್ತ ಬಾಲಕಿಯರು ಕಾಣೆಯಾಗಿದ್ದಾರೆ ಎಂದು ಪೊಲೀಸರು  ಮಂಗಳವಾರ ತಿಳಿಸಿದ್ದಾರೆ. ಮೂವರು ವಿದ್ಯಾರ್ಥಿನಿಯರು ನಿನ್ನೆ ಶಾಲೆಗೆ ತೆರಳಿದ್ದು, ಬಳಿಕ ನಾಪತ್ತೆಯಾಗಿದ್ದಾರೆ. ಮೂವರಲ್ಲಿ ಓರ್ವ ವಿದ್ಯಾರ್ಥಿನಿ 2700ರೂ. ನಗದು ಮತ್ತು ಬಟ್ಟೆಗಳನ್ನು ಶಾಲೆಯ ಕಾರ್ಯಕ್ರಮಕ್ಕೆಂದು ತೆಗೆದಕೊಂಡು ಹೋಗಿದ್ದಾಳೆ. ಬಾಲಕಿಯರನ್ನು ಹುಡುಕಲು ಮೂರು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ತಿಳಿಸಿದ್ದಾರೆ. ಬಾಲಕಿಯರಲ್ಲಿ ಇಬ್ಬರು 15 ವರ್ಷ ವಯಸ್ಸಿನವರಾಗಿದ್ದರೆ, ಇನ್ನೊಬ್ಬರಿಗೆ 10 ವರ್ಷ ವಯಸ್ಸಾಗಿದೆ ಎಂದು ಅವರು ಹೇಳಿದರು. ಅಧಿಕಾರಿಗಳ ಪ್ರಕಾರ … Read more

ಶಾಕಿಂಗ್ ನ್ಯೂಸ್: ಶಾಲೆಯಿಂದ 317ಕ್ಕೂ ಅಧಿಕ ವಿದ್ಯಾರ್ಥಿನಿಯರ ಅಪಹರಣ

niegiria

ಉತ್ತರನೈಜೀರಿಯಾ(27-02-2021): ವಸತಿ ಶಾಲೆಯೊಂದರಿಂದ 317ಕ್ಕೂ ಅಧಿಕ ಬಾಲಕಿಯರನ್ನು ಬಂದೂಕುಧಾರಿಗಳು ಅಪಹರಿಸಿರುವ ಘಟನೆ ಉತ್ತರ ನೈಜೀರಿಯಾದಲ್ಲಿ ನಡೆದಿದೆ. ನೈಜೀರಿಯಾದ ಜಂಗೆಬೆ ಪಟ್ಟಣದಲ್ಲಿರುವ ಬಾಲಕಿಯರ ಸರ್ಕಾರಿ ಕಿರಿಯ ಮಾಧ್ಯಮಿಕ ಶಾಲೆಯಿಂದ ವಿದ್ಯಾರ್ಥಿನಿಯರ ಸಾಮೂಹಿಕ ಅಪಹರಣ ಮಾಡಲಾಗಿದೆ. ಪೊಲೀಸ್‌ ಮತ್ತು ಮಿಲಿಟರಿ ಪಡೆ ವಿದ್ಯಾರ್ಥಿನಿಯರ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದೆ. ಶಾಲೆಯ ಹತ್ತಿರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇನಾ ಪಡೆಯಿದ್ದರೂ, ಬಾಲಕಿಯರನ್ನು ರಕ್ಷಿಸಲು ಅವರಿಗೆ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ನೈಜೀರಿಯಾದ ಅಧ್ಯಕ್ಷ ಮೊಹಮ್ಮದು ಬುಹಾರಿ, ಎಲ್ಲಾ ಮಕ್ಕಳನ್ನು ಸುರಕ್ಷಿತವಾಗಿ … Read more

ಕಿಕ್ಕಿರಿದ ಬಸ್ ನಲ್ಲಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥ: ಸಾರಿಗೆ ಸಚಿವರ ತವರಿನಲ್ಲೇ ದುಸ್ಥಿತಿ

students

ಬೆಳಗಾವಿ(24-02-2021): ಕಿಕ್ಕಿರಿದ ಬಸ್​ನಲ್ಲಿ ಪ್ರಯಾಣಿಕರ ಮಧ್ಯೆ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವ ಘಟನೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ತವರಿನಲ್ಲಿ ನಡೆದಿದೆ. ಖಾನಾಪುರ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸರಿಯಾಗಿ ಬಸ್  ವ್ಯವಸ್ಥೆ ಇಲ್ಲ. ಒಂದೇ ಬಸ್ಸಿನಲ್ಲಿ ತುಂಬಿಸಿ ಕರೆದುಕೊಂಡು ಹೋಗಲಾಗುತ್ತಿದೆ.  ಇದರಿಂದಾಗಿ ಕಿಕ್ಕಿರಿದ ಬಸ್​ನಲ್ಲಿ ಪ್ರಯಾಣಿಕರ ಮಧ್ಯೆ ಸಿಲುಕಿ ಉಸಿರುಗಟ್ಟಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.  ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿಗಳ ಪಾಲಕರು ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ … Read more