ವಾಕ್ ಸ್ವಾತಂತ್ರ್ಯಇತ್ತೀಚಿನ ದಿನಗಳಲ್ಲಿ ಹೆಚ್ಚು ದುರುಪಯೋಗವಾಗುತ್ತಿದೆ-ಸುಪ್ರೀಂ ಕೋರ್ಟ್

supremcourt

ದೆಹಲಿ(08-10-2020): ವಾಕ್ ಸ್ವಾತಂತ್ರ್ಯವನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ವಾಕ್ ಸ್ವಾತಂತ್ರ್ಯ ಇತ್ತೀಚಿನ ದಿನಗಳಲ್ಲಿ ಅತ್ಯಂತ ದುರುಪಯೋಗಪಡಿಸಿಕೊಂಡ ಸ್ವಾತಂತ್ರ್ಯಗಳಲ್ಲಿ ಒಂದಾಗಿದೆ ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಅವರು ಮರ್ಕಾಜ್ ನಿಜಾಮುದ್ದೀನ್‌ನಲ್ಲಿ ನಡೆದ ತಬ್ಲೀಘಿ ಸಭೆ ಕುರಿತು ಮಾದ್ಯಮಗಳು ದ್ವೇಷವನ್ನು ಹರಡಿದ್ದಕ್ಕಾಗಿ ಮಾಧ್ಯಮಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೋರಿ ಸಲ್ಲಿಸಿದ ಮನವಿಗಳ ವಿಚಾರಣೆಯ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದಾರೆ. ಮಾರ್ಚ್ ನಲ್ಲಿ  ದೆಹಲಿಯಲ್ಲಿ  ನಡೆದ ತಬ್ಲೀಘಿ ಸಭೆ ದೊಡ್ಡ ವಿವಾದವನ್ನು ಹುಟ್ಟುಹಾಕಿತ್ತು. ಕಾರ್ಯಕ್ರಮದಲ್ಲಿ ಭಾಗಿಯಾದವರನ್ನು ಉದ್ದೇಶಪೂರ್ವಕವಾಗಿ ಕೊರೊನಾ ಹರಡಲು … Read more

ಸುಪ್ರೀಂ ಕೋರ್ಟ್ ಅಂಗಳದಲ್ಲಿ ಕೃಷಿ ಮಸೂದೆ

suprem court

ನವದೆಹಲಿ(29-09-2020): ನೂತನ ಕೃಷಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಕೇರಳದ ತ್ರಿಶೂರ್ ಸಂಸದ ಟಿ.ಎನ್. ಪ್ರತಾಪನ್, ಕೃಷಿ ಮಸೂದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ನೂತನ ಕಾಯ್ದೆ 2020ರ ರೈತರ ಬೆಲೆ ಖಾತರಿ ಒಪ್ಪಂದ ಮತ್ತು ಕೃಷಿ ಸೇವೆಗಳ ಕಾಯ್ದೆ, ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು), 15 (ತಾರತಮ್ಯ ನಿಷೇಧ) ಮತ್ತು 21 (ಜೀವನ ಮತ್ತು ಸ್ವಾತಂತ್ರ್ಯದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ್ದಾರೆ. ರಾಷ್ಟ್ರಪತಿಗಳು ಸಹಿ … Read more