ತಮಿಳುನಾಡಿನಲ್ಲಿ ಎಐಡಿಎಂಕೆ ಸೋಲು: ಮುಖ್ಯಮಂತ್ರಿ ಸ್ಥಾನಕ್ಕೆ ಕೆ.ಪಳಿನಿಸ್ವಾಮಿ ರಾಜಿನಾಮೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಚೆನ್ನೈ: ತಮಿಳುನಾಡು ರಾಜ್ಯದ ಆಡಳಿತಾರೂಢ ಪಕ್ಷ ಎಐಡಿಎಂಕೆ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎ.ಕೆ.ಪಳನಿಸ್ವಾಮಿ ಸೋಮವಾರ ರಾಜೀನಾಮೆ ನೀಡಿದ್ದಾರೆ.

2017 ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಪಳಿನಿಸ್ವಾಮಿ ತಮ್ಮ ಪಕ್ಷ ಈಗ ಬಹುಮತ ಕಳೆದುಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜಿನಾಮೆ ಪತ್ರವು ತಮ್ಮ ಕಾರ್ಯದರ್ಶಿ ಮೂಲಕ ರಾಜ್ಯಪಾಲರಿಗೆ ತಲುಪಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಮೇ 2 ರಂದು ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ, ಡಿಎಂಕೆ ಪಕ್ಷ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಂ.ಕೆ ಸ್ಟಾಲಿನ್ ನೇತೃತ್ವದ ಹೊಸ ಸರ್ಕಾರ ಉಸ್ತುವಾರಿ ವಹಿಸಿಕೊಳ್ಳಲಿದ್ದಾರೆ. ಮೇ 7ರಂದು ಡಿಎಂಕೆ ಪಕ್ಷದ ಎಮ್.ಕೆ.ಸ್ಟಾಲಿನ್‌ ಅಧಿಕಾರ ವಹಿಸಿಕೊಳ್ಳಲಿದ್ದಾರೆ.ರಾಜ್ಯಪಾಲರ ಕಚೇರಿ ಪೂರ್ವಸಿದ್ಧತಾ ಕಾರ್ಯಗಳಲ್ಲಿ ತೊಡಗಿದೆ

ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ 125 ಸ್ಥಾನಗಳನ್ನು ಗೆದ್ದರೆ, ಒ ಪನ್ನೀರ್‌ಸೆಲ್ವಂ ಮತ್ತು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ 65 ಸ್ಥಾನಗಳನ್ನು ಗೆದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆ ಪಕ್ಷದ ಸ್ಟಾಲಿನ್ ಮುಖ್ಯಮಂತ್ರಿ ಅಗಲಿದ್ದಾರೆ, ಎಐಎಡಿಎಂಕೆ ಪಕ್ಷ ವಿರೋಧ ಪಕ್ಷ ಸ್ಥಾನ ಪಡೆದಿರುತ್ತದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು