ತಮಿಳುನಾಡು ಎಲೆಕ್ಷನ್: ಅಣ್ಣಾಮಲೈ, ನಟಿ ಖಷ್ಬೂಗೆ ಬಿಜೆಪಿ ಟಿಕೆಟ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ತಮಿಳುನಾಡು ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಲಾಗಿದೆ.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಇದರಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಕಾರೈಕುಡಿ ಕ್ಷೇತ್ರದಲ್ಲಿ ಹೆಚ್. ರಾಜಾ, ಧರ್ಮಪುರಂ ಕ್ಷೇತ್ರದಲ್ಲಿ ಪಕ್ಷದ ನಾಯಕ ಮುರುಗನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಅಣ್ಣಾಮಲೈ 2019ರಲ್ಲಿ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ ಬಳಿಕ 2020ರ ಆಗಸ್ಟ್ ನಲ್ಲಿ ಬಿಜೆಪಿಗೆ ಸೇರಿದ್ದರು. ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷರಲ್ಲಿ ಒಬ್ಬರಾಗಿ ನೇಮಕಗೊಂಡಿದ್ದರು. ಬಿಜೆಪಿ ಸೇರಿ 7 ತಿಂಗಳ ಬಳಿಕ ಅರಾವಕುರುಚಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಬಿಜೆಪಿ ತಮಿಳುನಾಡಿನಲ್ಲಿ ಎಐಎಡಿಎಂಕೆ ಹಾಗೂ ಇತರ ಮೈತ್ರಿಪಕ್ಷಗಳೊಂದಿಗೆ ಸೇರಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಬಿಜೆಪಿ ತಮಿಳುನಾಡಿನಲ್ಲಿ ಒಟ್ಟು 20 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಈ ರಾಜ್ಯದಲ್ಲಿ ಎ.6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು