ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಎಸ್. ಪಿ.ಜನನಾಥನ್ ನಿಧನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಖ್ಯಾತ ಸಿನಿಮಾ ನಿರ್ದೇಶಕ ಎಸ್.‌ಪಿ. ಜನನಾಥನ್(61) ಭಾನುವಾರ ಬೆಳಿಗ್ಗೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ. ಹೃದಯಾಘಾತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೇ 7, 1959 ರಂದು ಜನಿಸಿರುವ ಜನನಾಥನ್ 2003 ರಲ್ಲಿ ‘ಇಯಾರ್ಕೈ’ ಸಿನಿಮಾದೊಂದಿಗೆ ಸಿನಿಮಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದರು. ಇದು ತಮಿಳು ಭಾಷೆಯಲ್ಲಿ ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ವಿಜಯ್ ಸೇತುಪತಿ ಮತ್ತು ಶ್ರುತಿ ಹಾಸನ್ ಅಭಿನಯದ ಲಾಬಮ್ ಅವರ ಕೊನೆಯ ಸಿನಿಮಾವಾಗಿದ್ದು, ಈ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ. ಅವರು ಇದುವರೆಗೂ ಇಯಾರ್‌‌ಕೈಪೆರಾನ್‌ಮೈಪುರಂಬೊಕ್ಕು ಮತ್ತು ಲಾಬಮ್ ಸೇರಿದಂತೆ ಒಟ್ಟು 5 ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಲಾಬಮ್ ಸಿನಿಮಾ ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ.

ಜನನಾಥನ್ ನಿಧನದಿಂದ ಸಿನಿಮಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಮಿಳು ಸಿನಿ ಪ್ರಿಯರು ಸೇರಿದಂತೆ ದೇಶದ ಹಲವಾರು ನಟ ನಟಿಯರು ಕಂಬನಿ ಮಿಡಿದಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು