ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ : ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಇದೇನು ಚುನಾಯಿತ ಸರ್ಕಾರವೋ?
ಹುಚ್ಚರ ಸಂತೆಯೋ? ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ..
ಏನಿದು ಮುಖ್ಯಮಂತ್ರಿಗಳೇ, ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಜ್ಯದಲ್ಲಿ ನೈಟ್ ಕರ್ಫ್ಯೂ ಹಾಗೂ ವಾರಾಂತ್ಯದ ಕರ್ಫ್ಯೂ. ಜಾರಿಗೊಳಿಸಿದ ಸರ್ಕಾರ ನಿನ್ನೆ ಮಧ್ಯಾಹ್ನ ದಿಂದ ರಾಜ್ಯಾದ್ಯಂತ ಅಘೋಷಿತ ಬಂದ್ ಮಾಡಲಾಗಿದೆ. ಯಾವುದೇ ಮುನ್ಸೂಚನೆ, ಆದೇಶ ಹೊರಡಿಸಿದೆ ಅಂಗಡಿ, ಮುಗ್ಗಟ್ಟು ಬಂದ್ ಮಾಡಿಸಿದ ರಾಜ್ಯ ಸರ್ಕಾರದ ನಡೆ ಜನರನ್ನು ದಿಕ್ಕೆಟ್ಟುವಂತೆ ಮಾಡಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಯಡಿಯೂರಪ್ಪ ಅವರೇ?
ಲಾಕ್ ಡೌನ್, ಬಂದ್, ಕರ್ಪ್ಯೂ‌, ಇನ್ನೇನೋ,
ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ
ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ.
ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು