ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ : ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಟಾಂಗ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಲಸಿಕೆ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿ ಅವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ರಾಜ್ಯ ಬಿಜೆಪಿ ನಾಯಕರು, ಈಗ ಪ್ರಧಾನಿಗಳು ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ.

ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿಗಳು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದು ಪ್ರಧಾನಿ ಮೋದಿಗೆ ಒತ್ತಾಯಿಸಿದ್ದಾರೆ.

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿ ಅವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ. ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ.

ಔಷಧಿ,‌ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು