ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ ಅವರನ್ನು ಬಂಧಿಸುವಂತೆ ರಾಜ್ಯ ಕಾಂಗ್ರೆಸ್ ದೂರು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಲಸಿಕೆ ಹಗರಣದಲ್ಲಿ ತೊಡಗಿಕೊಂಡಿರುವ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರುಗಳನ್ನು ಕೂಡಲೇ ಬಂಧಿಸಿ, ಉನ್ನತ ತನಿಖೆಗೆ ಒಳಪಡಿಸಬೇಕು ಹಾಗೂ ಅವರಿಬ್ಬರನ್ನೂ ಚುನಾಯಿತ ಸ್ಥಾನಗಳಿಂದ ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ಕುರಿತು ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಸಿಲುಕಿರುವ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದೆ.

4 ಕೋಟಿ ಲಸಿಕೆಗಳು ನಾಪತ್ತೆಯಾದ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿ ಸುಬ್ರಮಣ್ಯ ಅವರುಗಳು ಸರ್ಕಾರದ ಉಚಿತ ಹಂಚಿಕೆಯ ಬಡವರ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಿಕೊಂಡು ಕಮಿಷನ್ ಪಡೆಯುತ್ತಿರುವ ‘ಮಹಾ ಹಗರಣ’ ಬೆಳಕಿಗೆ ಬಂದಿದೆ ಎಂದು ಆರೋಪಿಸಿದೆ.

ಜನರ ಸಾವಿನ ನಡುವೆ ಬಿಜೆಪಿ ಕೋವಿಡ್‌ನಲ್ಲಿ ನಿರಂತರವಾಗಿ ಹಗರಣ ನಡೆಸಿಕೊಂಡು ಬರುತ್ತಿದೆ, ಇದು ಕೊನೆಯಾಗಬೇಕು, ಬಡವರ ಲಸಿಕೆ ಕಿತ್ತುಕೊಂಡವರಿಗೆ ಶಿಕ್ಷೆ ಅತ್ಯಗತ್ಯ.
ಸರ್ಕಾರದಿಂದ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಿ ಅದನ್ನು ₹900 ರಿಂದ ₹1200ಕ್ಕೆ ಮಾರಾಟ ಮಾಡಲಾಗುತ್ತಿದೆ.ಇದರಲ್ಲಿ ಆಡಳಿತ ಪಕ್ಷದವರು ಶಾಮೀಲಾಗಿದ್ದಾರೆ. ಈ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು. ಪ್ರಕರಣದ ಬಗ್ಗೆ ದೂರು ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿದೆ.

ರಾಜ್ಯಾದ್ಯಂತ ಲಸಿಕೆಗಳಿಗೆ ಹಾಹಾಕಾರವಿದೆ, ಬಡ ಜನರ ಲಸಿಕೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಮಾರಾಟ ಮಾಡುತ್ತಿರುವ ಸಂಸದ ತೇಜಸ್ವಿ ಸೂರ್ಯನನ್ನು ಸಂಸತ್ ಸದಸ್ಯ ಸ್ಥಾನದಿಂದ ಹಾಗೂ ಶಾಸಕ ರವಿ ಸುಬ್ರಮಣ್ಯ ಅವರನ್ನು ಶಾಸಕ ಸ್ಥಾನದಿಂದ ಕೂಡಲೇ ವಜಾಗೊಳಿಸಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಕಾಂಗ್ರೆಸ್ ಆಗ್ರಹಿಸಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು