ಕೊರೊನಾ ಎಫೆಕ್ಟ್: ತೆಲಂಗಾಣದಲ್ಲಿ ನಾಳೆಯಿಂದ ’10 ದಿನಗಳ ಲಾಕ್ ಡೌನ್’ ಘೋಷಣೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೈದರಾಬಾದ್: ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ತೆಲಂಗಾಣ ರಾಜ್ಯದಲ್ಲಿ ನಾಳೆಯಿಂದ 10 ದಿನಗಳ ಕಾಲ ಲಾಕ್​ಡೌನ್ ಘೋಷಿಸಿ ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.

ತೆಲಂಗಾಣ ಮುಖ್ಯಮಂತ್ರಿ ನೇತೃತ್ವದದಲ್ಲಿ ನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ, ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ಸೇವೆಗಳ ಖರೀದಿಗೆ ಅವಕಾಶ ನೀಡಲಾಗಿದ್ದು,ಉಳಿದ ಸಮಯದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಮನೆಯಿಂದ ಹೊರಗೆ ಬಾರದಂತೆ ಸೂಚಿಸಲಾಗಿದೆ.

ಕೊರೊನಾ ಲಸಿಕೆ ಖರೀದಿಗಾಗಿ ತೆಲಂಗಾಣ ಸರ್ಕಾರ ಗ್ಲೋಬಲ್ ಟೆಂಡರ್ ಕರೆಯಲು ಇಂದು ನಡೆದ ಕ್ಯಾಬಿನೆಟ್ ಸಭೆಯಲ್ಲಿ ನಿರ್ಧರಿಸಿದೆ. ಈ ಕುರಿತು ತೆಲಂಗಾಣ ಸಿಎಂ ಕಚೇರಿಯ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ‌.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು