ತೆಲುಗು ನಟ ಅಲ್ಲು ಅರ್ಜುನ್ ಗೆ ಕೊರೊನಾ ಪಾಸಿಟಿವ್, ಭಯ ಪಡದಂತೆ ಅಭಿಮಾನಿಗಳಿಗೆ ವಿನಂತಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಹೈದರಾಬಾದ್ : ಟಾಲಿವುಡ್ ಜನಪ್ರಿಯ ಸೂಪರ್ ಸ್ಟಾರ್ ನಟ ಅಲ್ಲು ಅರ್ಜುನ್ ಅವರಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವಿಟ್ಟರ್ ಹಾಗೂ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ಮಾಹಿತಿ ತಿಳಿಸಿದ್ದಾರೆ.

‘ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದೇನೆ, ನನಗೆ ಕೊರೋನಾ ಪಾಸಿಟಿವ್ ಬಂದಿದ್ದು, ಎಲ್ಲಾ ನಾನು ಕೊರೊನಾ ಶಿಷ್ಟಾಚಾರಗಳನ್ನು ಅನುಸರಿಸುತ್ತೇನೆ’ ನಾನು ಮನೆಯಲ್ಲಿ ಸ್ವಯಂ ಐಸಲೋಷನ್ ನಲ್ಲಿರುವೆ ಎಂದು ಬರೆದಿದ್ದಾರೆ, ಅಲ್ಲಿ ಅವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ.

ಕೊರೊನಾ ಪಾಸಿಟಿವ್ ವರದಿ ಬಂದಿದೆ ಎಂದು ನನ್ನ ಅಭಿಮಾನಿ ಬಳಗ ಭಯ ಪಡುವ ಅಗತ್ಯವಿಲ್ಲ, ನಾನು ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಟೇಸ್ಟ್ ಮಾಡಿಸಿಕೊಳ್ಳಿ, ಕೊರೊನಾ ಲಸಿಕೆ ಪಡೆದುಕೊಳ್ಳಲು ಅಲ್ಲು ಅರ್ಜುನ್ ಅಭಿಮಾನಿಗಳಿಗೆ ವಿನಂತಿಸಿದ್ದಾರೆ.

ನಾನು ಮನೆಯಲ್ಲಿಯೇ ಪ್ರತ್ಯೇಕಿಸಿಕೊಂಡು ಚಿಕಿತ್ಸೆ ಪಡೆಯುವೆ, ನೀವು ಸುರಕ್ಷಿತವಾಗಿರಿ‌‌ಎಂದು ಅವರು ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು