ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ : ಕಾಂಗ್ರೆಸ್ ಕಿಡಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಟೆಸ್ಟ್ , ಟ್ರ್ಯಾಕ್, ಟ್ರೀಟ್ ಮೂರನ್ನೂ ರಾಜ್ಯ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಟ್ವೀಟ್ ಮಾಡಿದ ಕಾಂಗ್ರೆಸ್,
ಬೆಂಗಳೂರಿನಿಂದ ಹಳ್ಳಿಗಳಿಗೆ ತೆರಳುವವರಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಲಿಲ್ಲ, ತೆರಳಿದವರಿಗೆ ಊರುಗಳಲ್ಲಿ ಟೆಸ್ಟಿಂಗ್ ಹಾಗೂ ಐಸೋಲೇಶನ್ ನಿಯಮ ರೂಪಿಸಿಲ್ಲ. ಡಾ.ಸುಧಾಕರ್ ಅವರೇ, ಕೂಡಲೇ ಗ್ರಾಮೀಣ ಭಾಗದತ್ತ ಗಮನಹರಿಸಿ ಸೋಂಕು ಹರಡದಂತೆ ತಡೆಗಟ್ಟಿ ಎಂದು ರಾಜ್ಯ ಕಾಂಗ್ರೆಸ್ ಒತ್ತಾಯಿಸಿದೆ.

ಕಾರ್ಮಿಕರು ತಮ್ಮ ಊರುಗಳತ್ತ ತೆರಳುತ್ತಿದ್ದಾರೆ, ತಮ್ಮಂದಿಗೆ ಸೋಂಕನ್ನು ಕೂಡ ಕೊಂಡೊಯುತ್ತಿದ್ದಾರೆ.
ಹಣದ ನೆರವು, ಆಹಾರದ ಭದ್ರತೆ ನೀಡಿ ಇದ್ದಲ್ಲಿಯೇ ಉಳಿಸಬಹುದಾದ ಅವಕಾಶವನ್ನು ಸರ್ಕಾರ ಬಳಸಲಿಲ್ಲ. ಊರಿಗೆ ತೆರಳುವವರಿಗೆ ಬಸ್ ವ್ಯವಸ್ಥೆ ಜೊತೆಗೆ ಸೋಂಕು ಪರೀಕ್ಷೆ, ಐಸೋಲೇಶನ್ ನಿಯಮ ರೂಪಿಸದಿರುವುದು ಸರ್ಕಾರದ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಕಾಂಗ್ರೆಸ್ ಕಿಡಿಕಾರಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು