ತಮಿಳುನಾಡು (11-02-2021): ನ್ಯಾಯಾಲಯಕ್ಕೆ ಹಾಜರಾಗಿ ಮನೆಗೆ ಹಿಂದಿರುಗುತ್ತಿದ್ದಾಗ ಇಬ್ಬರು ಕೊಲೆ ಆರೋಪಿಗಳನ್ನು ಈರೋಡ್ ನ ಬೀದಿಯಲ್ಲಿ ಗುಂಪೊಂದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ವರದಿಯಾಗಿದೆ.
30 ಮತ್ತು 38 ವರ್ಷ ವಯಸ್ಸಿನ ಇಬ್ಬರು ವ್ಯಕ್ತಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ವೀರಪ್ಪಂಚತ್ರಂ ಪ್ರದೇಶದ ಕಿರಿದಾದ ಬೀದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸುಮಾರು 7-8 ಜನರ ಗ್ಯಾಂಗ್ ಅವರನ್ನು ತಡೆದು ತೀಕ್ಷ್ಣವಾದ ಆಯುಧಗಳಿಂದ ಹಲ್ಲೆ ನಡೆಸಿ ಕೊಂದು ಹಾಕಿ ಪರಾರಿಯಾಗಿದ್ದಾರೆ.
2018 ರಲ್ಲಿ ವ್ಯಕ್ತಿಯ ಕೊಲೆ ಪ್ರಕರಣದ ಪ್ರಧಾನ ಆರೋಪಿಗಳಾದ ಇವರು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗಿ ಮನೆಗೆ ಮರಳುತ್ತಿದ್ದಾಗ ಗ್ಯಾಂಗ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ. ಇದು ಈ ಹಿಂದಿನ ಅಪರಾಧಕ್ಕೆ ಪ್ರತೀಕಾರ ತೀರಿಸಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.