ಚೆನ್ನೈ(13-02-2021): ವಿರುಧ್ ನಗರದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ರಾಸಾಯನಿಕಗಳನ್ನು ಬೆರೆಸುವಾಗ ಉಂಟಾದ ಘರ್ಷಣೆಯು ಸ್ಫೋಟಕ್ಕೆ ಕಾರಣವಾಗಿದೆ. ಘಟನೆಯಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಪಟಾಕಿ ಕಾರ್ಖಾನೆ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸೇರಿ ತಲಾ 5 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಗಂಭೀರವಾಗಿ ಗಾಯಗೊಂಡವರ ಕುಟುಂಬಗಳಿಗೆ ಕೂಡ ರಾಜ್ಯ ಸರಕಾರ 1 ಲಕ್ಷ ಮತ್ತು ಕೇಂದ್ರ 50,000ರೂ. ಪರಿಹಾರವನ್ನು ಘೋಷಿಸಿದೆ.