ಬಿಗ್ ನ್ಯೂಸ್: ಮತ್ತೋರ್ವ ಸಚಿವ ಕೊರೊನಾಗೆ ಬಲಿ

minister death
Share on facebook
Share on twitter
Share on linkedin
Share on whatsapp
Share on telegram
Share on email
Share on print

ಚೆನ್ನೈ(01-11-2020): ತಮಿಳುನಾಡು ಕೃಷಿ ಸಚಿವ ಆರ್. ದೊರೈಕಣ್ಣು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 72 ವರ್ಷದ ದೊರೆಕಣ್ಣು ತಡರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ದೊರೈಕಣ್ಣು ಸಾವಿನ ಬಗ್ಗೆ ಕಾವೇರಿ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಅರವಿಂದ್ ಸೆಲ್ವರಾಜ್ ಮಾಹಿತಿ ನೀಡಿದ್ದಾರೆ.

ಅ.13 ರಂದು ದೊರೈಕಣ್ಣು ಅವರನ್ನು ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಲ್ಲೂಪುರಂ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಕಾವೇರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆ ಬಳಿಕ ಅವರು ವೆಂಟಿಲೇಟರ್ ಸಪೋರ್ಟ್ ನಲ್ಲಿದ್ದರು. ಆದರೆ ನಿನ್ನೆ ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು