ಉಗ್ರನನ್ನು ಹೊಡೆದುರುಳಿಸಿದ ಭಧ್ರತಾ ಪಡೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರ ಪಟ್ಟಣದ ಬರಗಾಮ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇದರಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಶ್ಮೀರ ವಲಯ ಪೊಲೀಸರು ಟ್ವಿಟರ್​ನಲ್ಲಿಅಧಿಕೃತ ಮಾಹಿತಿ ನೀಡಲಾಗಿದೆ.

ಬರಗಾಮ್ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಲಭಿಸಿದ ನಂತರ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು