ಮೈಸೂರು(04-02-2021): ಮೈಸೂರು ಸಾಲಿಗ್ರಾಮ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಮಂಗಳಮುಖಿ ದೇವಿಕಾ ಅವರು ಆಯ್ಕೆಯಾಗಿದ್ದು, ರಾಜ್ಯದ ರಾಜಕೀಯದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ.
ಸಾಲಿಗ್ರಾಮದಲ್ಲಿ ಒಟ್ಟು 30 ಮಂದಿ ಗ್ರಾಮ ಪಂಚಾಯಿತಿ ಸದಸ್ಯರಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ ಮೀಸಲಾಗಿತ್ತು.
ಅಧ್ಯಕ್ಷ ಸ್ಥಾನಕ್ಕೆ ಮಂಗಳಮುಖಿ ದೇವಿಕಾ ಮತ್ತು ಲಕ್ಷ್ಮಿ ಸೋಮಶೇಖರ್ ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಕೊನೇ ಕ್ಷಣದಲ್ಲಿ ಲಕ್ಷ್ಮಿ ಸೋಮಶೇಖರ್ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ದೇವಿಕಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದು ರಾಜ್ಯದ ರಾಜಕೀಯದಲ್ಲಿ ಹೊಸ ಇತಿಹಾಸವಾಗಿದೆ.