ಜಾರ್ಖಂಡ್(05-12-2020): ಸರಕಾರಿ ನೌಕರರಿಗೆ ಜಾರ್ಖಂಡ್ ಸರ್ಕಾರ ಮಹತ್ವದ ಸೂಚನೆಯನ್ನು ನೀಡಿದ್ದು, ತಂಬಾಕು ಸೇವಿಸುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ.
ತಂಬಾಕು ನಿಯಂತ್ರಣ ಸಮನ್ವಯ ಸಮಿತಿ ಸಭೆಯಲ್ಲಿ ಈ ಕುರಿತು ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. 2021 ರ ಏಪ್ರಿಲ್ 1 ರಿಂದ ಹೊಸ ನೀತಿ ಜಾರಿಗೆ ಬರಲಿದೆ. ಸರ್ಕಾರಿ ಉದ್ಯೋಗಿಗಳು ಸಿಗರೇಟ್, ಬೀಡಿ, ಗುಟ್ಕಾ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನ ಸೇವಿಸುವುದಿಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸಬೇಕು.
ನೌಕರರು ಕಚೇರಿಯ ಒಳಗಾಗಲಿ, ಹೊರಗಾಗಲಿ ತಂಬಾಕು ಉತ್ಪನ್ನಗಳನ್ನು ಸೇವಿಸಬಾರದು ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ ತಂಬಾಕು ಮಾರಾಟಕ್ಕೂ ನಿರ್ಬಂಧವನ್ನು ಜಾರ್ಖಾಂಡ್ ಸರಕಾರ ವಿಧಿಸಿದೆ.