ಪಾಣಿಪತ್(15-10-2020): ಮಹಿಳೆಯೋರ್ವಳನ್ನು ಒಂದು ವರ್ಷದಿಂದ ಪತಿ ಶೌಚಾಲಯದಲ್ಲಿ ಕೂಡಿ ಹಾಕಿರುವ ಘಟನೆ ಹರ್ಯಾಣದ ಪಾಣಿಪತ್ನಲ್ಲಿ ನಡೆದಿದೆ.
ಮಹಿಳೆಯ ಪತಿ, ಆಕೆ ಮಾನಸಿಕ ಅಸ್ವಸ್ಥಳು, ಹೇಳಿದ ಮಾತು ಕೇಳುತ್ತಿರಲಿಲ್ಲ ಎಂದು ಶೌಚಾಲಯದಲ್ಲಿ ಕೂಡಿ ಹಾಕಿದ್ದ.
ಘಟನೆ ಬಗ್ಗೆ ಮಾಹಿತಿ ತಿಳಿದು ಮಹಿಳಾ ರಕ್ಷಣೆ ಮತ್ತು ಬಾಲ್ಯವಿವಾಹ ತಡೆ ಅಧಿಕಾರಿ ರಜನಿ ನೇತೃತ್ವದ ತಂಡ ಆಗಮಿಸಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ವೇಳೆ ಮಾತನಾಡಿದ ರಜನಿ, ಮಹಿಳೆ ಮಾನಸಿಕ ಅಸ್ವಸ್ಥತೆಯಂತೆ ಕಂಡುಬಂದಿಲ್ಲ.ಆರೋಗ್ಯ ತಪಾಸಣೆ ನಡೆಯುತ್ತಿದೆ. ಹೆಚ್ಚಿನ ತನಿಖೆ ಬಳಿಕ ಮಾಹಿತಿ ತಿಳಿಯಬೇಕಿದೆ ಎಂದು ಹೇಳಿದ್ದಾರೆ.