ಡಿ.8ಕ್ಕೆ ಭಾರತ್ ಬಂದ್| ನಾಳೆ ಕರ್ನಾಟಕ ಬಂದ್ ಇದೆಯಾ?

karnataka bandh
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(04-12-2020): ನಾಳೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆನೀಡಿದೆ.

ಕರ್ನಾಟಕ ಬಂದ್ ಗೆ ಅನೇಕ ಸಂಘಟನೆಗಳು ಬೆಂಬಲಿಸಿವೆ. ಮತ್ತೆ ಕೆಲವು ಸಂಘಟನೆಗಳು ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಕರವೇ ನಾರಾಯಣಗೌಡ ಬಣ, ಕರವೇ ಪ್ರವೀಣ್ ಶೆಟ್ಟಿ ಬಣ, ರಾಜು ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದ, ಮುಖ್ಯಮಂತ್ರಿ ಚಂದ್ರು, ಬಿ.ಟಿ.ಲಲಿತಾನಾಯಕ್ ಸೇರಿ ಹಲವು ಸಾಹಿತಿಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ವಾಟಾಳ್ ನಾಗರಾಜ್, ಮರಾಠ ಪ್ರಾಧಿಕಾರ ರಚನೆ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು, ಇಲ್ಲದಿದ್ದರೆ ಕರ್ನಾಟಕ ಬಂದ್ ನೂರಕ್ಕೆ ನೂರರಷ್ಟು ನಡೆಯುವುದು ಖಚಿತ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕನ್ನಡಿಗರ ನಡುವಿನ ಸವಾಲ್ ಆಗಿದೆ ಎಂದು ಹೇಳಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಡಿಸೆಂಬರ್ 4ರ ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.ಬಂದ್ ಹಿಂಪಡೆಯುವಂತೆ ಕನ್ನಡ ಸಂಘಟನೆಗಳನ್ನು ಮನವಿ ಮಾಡಿಕೊಂಡಿದ್ದಾರೆ.

ಇನ್ನು  ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ರೈತರು ಕೈಗೊಂಡ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ರೈತ ಮುಖಂಡರು ಭಾರತ್ ಬಂದ್ ಗೆ ಕರೆ ನೀಡಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು