ತೌಕ್ಟೆ ಚಂಡಮಾರುತ: ಸಂಕಷ್ಟಕ್ಕೆ ಸಿಲುಕಿದ ಜನರನ್ನು ಸಹಾಯ ಮಾಡುವಂತೆ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಮನವಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ದೇಶದಲ್ಲಿ ತೌಕ್ಟೆ ಚಂಡಮಾರುತ ಆರಂಭವಾಗುತ್ತಿದ್ದು, ಸಂಕಷ್ಟಕ್ಕೆ ಸಿಲುಕಿದ ಜನರನ್ನು ಸಹಾಯ ಮಾಡುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶನಿವಾರ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇರಳ, ಮಹಾರಾಷ್ಟ್ರ, ಗೋವಾ, ತಮಿಳುನಾಡು, ಗುಜರಾತ್ ಹಾಗೂ ಕರ್ನಾಟಕ ರಾಜ್ಯದಲ್ಲಿ ಸೈಕ್ಲೋನ್ ಚಂಡಮಾರುತದ ಎಚ್ಚರಿಕೆಯನ್ನು ನೀಡಲಾಗಿದೆ. ಹೀಗಾಗಿ ಆಗತ್ಯವಿರುವವರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ದಯವಿಟ್ಟು, ಎಲ್ಲರೂ ಸುರಕ್ಷಿತವಾಗಿ ಇರುವಂತೆಯೂ ಅವರು ಸೂಚಿಸಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾದ ತೌಕ್ಟೆ ಚಂಡಮಾರುತ, ಶನಿವಾರ ಗಂಭೀರ ಸ್ವರೂಪ ಪಡೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು