ಟಿಆರ್‌ಪಿ ಹಗರಣ: ರಿಪಬ್ಲಿಕ್ ಟಿವಿಗೆ ಶಾಕ್ ನೀಡಿದ ಹೈಕೋರ್ಟ್

arnab
Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ(07-12-2020):  ರಿಪಬ್ಲಿಕ್ ಮೀಡಿಯಾ ನೆಟ್ವರ್ಕ್ನ ಮಾಲಕ ಸಂಸ್ಥೆ ಎಆರ್ಜಿ ಔಟ್ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಮನವಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮಹಾ ಸರಕಾರ ಸಲ್ಲಿಸಿದ ಕೇಸ್ ನಿಂದ ಎಆರ್ಜಿ ಔಟ್ ಟ್ಲಿಯರ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ತಮ್ಮ ಕೆಲಸಗಾರರಿಗೆ ಭದ್ರತೆ ಮತ್ತು ರಕ್ಷಣೆಯನ್ನು ನೀಡಬೇಕೆಂದು ಸುಪ್ರೀಂಗೆ ಅರ್ಜಿಯನ್ನು ಸಲ್ಲಿಸಿತ್ತು.

ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠದ ಮುಂದೆ ಈ ವಿಷಯ ವಿಚಾರಣೆಗೆ ಬಂದಿತ್ತು. ಮಹಾರಾಷ್ಟ್ರ ಪೊಲೀಸರು ಯಾವುದೇ ಉದ್ಯೋಗಿಯನ್ನು ಬಂಧಿಸಬಾರದು. ಪ್ರಕರಣಗಳನ್ನು ಸಿಬಿಐಗೆ ವರ್ಗಾಯಿಸಬೇಕೆಂದು ನೀವು ಬಯಸುತ್ತೀರಿ. ನೀವು ಇದನ್ನು ಹಿಂತೆಗೆದುಕೊಳ್ಳುವುದು ಉತ್ತಮ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಎಆರ್ಜಿ ಔಟ್ ಲಿಯರ್ ಮೀಡಿಯಾ ಪರ ಹಾಜರಾದ ಹಿರಿಯ ವಕೀಲ ಮಿಲಿಂದ್ ಸಾಥೆ ಅವರಿಗೆ ಸೂಚಿಸಿದೆ.

ರಿಪಬ್ಲಿಕ್ ಮಾಧ್ಯಮ ಸಂಸ್ಥೆ, ಅದರ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಇತರ ಉದ್ಯೋಗಿಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸುವುದನ್ನು ತಡೆಯಬೇಕು, ಮಹಾರಾಷ್ಟ್ರ ಸರ್ಕಾರ ಅವರನ್ನು ‘ದೌರ್ಜನ್ಯ’ ಮಾಡುವುದನ್ನು ನಿಲ್ಲಿಸಬೇಕು ಮತ್ತು ಅವರ ವಿರುದ್ಧ ದಾಖಲಾದ ಎಲ್ಲಾ ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು  ಎಂದು ಅವರು ಮನವಿ ಸಲ್ಲಿಸಿದ್ದರು.

 

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು