ಹಾಥರಸ್ (09/10/2020): ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪರಿಶಿಷ್ಟ ಜಾತಿಗೆ ಸೇರಿದ ಯುವತಿಯ ಮನೆಯ ಸುತ್ತ ಯೋಗಿ ಸರಕಾರ 60 ಮಂದಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಉತ್ತರ ಪ್ರದೇಶದ ಪೊಲೀಸರು ಮಹಿಳೆ ಸೇರಿದಂತೆ 60 ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಎಂಟು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ‘ ಎಂದಿದ್ದಾರೆ.