ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ : ನವೆಂಬರ್ 8ರಂದು ಪ್ರಧಾನ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಉಡುಪಿ: ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಯನ್ನು ಪರಿಗಣಿಸಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗೆ ಕೇಂದ್ರ ಸರ್ಕಾರ ಮರಣೋತ್ತರವಾಗಿ ಘೋಷಿಸಲಾದ 2020ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಯನ್ನು ನವೆಂಬರ್ 8ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ತಿಳಿದು ಬಂದಿದೆ.

 

ಈ ಕುರಿತು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ್ದಾರೆ.

‘ಪರಮಪೂಜ್ಯ ಉಡುಪಿ ಅಧೋಕ್ಷಜ ಮಠದ ಪೀಠಾಧಿಪತಿಗಳಾಗಿ ನಮ್ಮೆಲ್ಲರಿಗೂ ಹಲವಾರು ವರ್ಷಗಳ ಕಾಲ ನಿರಂತರ ಮಾರ್ಗದರ್ಶನ ಮಾಡಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ’ ಎಂದು ಕಾರಜೋಳ ಅವರು ಟ್ವೀಟ್ ನಲ್ಲಿ ಹೇಳಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು