ಉಡುಪಿಯಲ್ಲಿ ಕೊರಗ ಸಮುದಾಯದ ಮೇಲೆ ನಡೆಸಿದ ಪೊಲೀಸ್ ದೌರ್ಜನ್ಯದ ಪ್ರಕರಣವನ್ನು ಸಿಓಡಿ ತನಿಖೆಗೆ ಆದೇಶಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಸಮುದಾಯದವರ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಪ್ರಕರಣದ ಬಗ್ಗೆ ಸಿಓಡಿ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶನಿವಾರ ಕೋಟತಟ್ಟು ಗ್ರಾಮಕ್ಕೆ ಭೇಟಿ ನೀಡಿದ್ದ ಸಚಿವ ಅರಗ ಜ್ಞಾನೇಂದ್ರ, ಸಂತ್ರಸ್ತರಿಗೆ ಎರಡು ಲಕ್ಷ ರೂಪಾಯಿಗಳ ಪರಿಹಾರ ಘೋಷಿಸಿದ್ದಾರೆ. ಪೊಲೀಸ್ ಲಾಠಿ ಚಾರ್ಜ್ ನಲ್ಲಿ ಗಾಯಗೊಂಡವರ ಕುಟುಂಬಕ್ಕೆ 50,000 ರೂಪಾಯಿ ಪರಿಹಾರವನ್ನೂ ವಿತರಿಸಿದ್ದಾರೆ.

ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗ ಕುಟುಂಬ ಸದಸ್ಯರ ವಿರುದ್ಧ ದಾಖಲಾದ ಪೊಲೀಸ್ ಮೊಕದ್ದಮೆಯನ್ನೂ ಹಿಂಪಡೆಯಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು