ಶ್ರೀನಗರ(26/10/2020): ಕಳೆದ ಕೆಲವು ವರ್ಷಗಳಿಂದ ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಇದೀಗ ಯಾವ ರಾಜ್ಯದಲ್ಲಿ ಅತೀ ಹೆಚ್ಚು ನಿರುದ್ಯೋಗ ಇದೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.
ರಾಜಸ್ಥಾನದಲ್ಲಿ ನಿರುದ್ಯೋಗ ದರ ಶೇಕಡ 19.7ರಷ್ಟಿದ್ದು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ ನಿರುದ್ಯೋಗ ದರ ಪ್ರಮಾಣ ಶೇಕಡ 16.2ರಷ್ಟಿದ್ದು, ದೇಶದಲ್ಲೇ ಎರಡನೇ ಸ್ಥಾನ ಪಡೆದಿದೆ. ಭಾರತೀಯ ಆರ್ಥಿಕತೆಯ ನಿಗಾ ಕೇಂದ್ರ (ಸಿಎಂಐಇ) ನೀಡಿದ ಮಾಹಿತಿ ಅನ್ವಯ, ದೇಶದಲ್ಲಿನ ನಿರುದ್ಯೋಗ ದರ ಶೇಕಡ 6.7ರಷ್ಟಿದೆ. ಅಂದರೆ, ಜಮ್ಮು ಮತ್ತು ಕಾಶ್ಮೀರದ ನಿರುದ್ಯೋಗ ದರ ರಾಷ್ಟ್ರೀಯ ಸರಾಸರಿಗಿಂತಲೂ ಹೆಚ್ಚಾಗಿದೆ.
370 ವಿಧಿ ರದ್ದುಪಡಿಸಿದ ಬಳಿಕ ಕಾಶ್ಮೀರದಲ್ಲಿ ನಿರುದ್ಯೋಗದ ಪ್ರಮಾಣ ಹೆಚ್ಚಾಗಿದೆ. ಅಂದಾಜು ಐದು ಲಕ್ಷ ಮಂದಿ ಕಾಶ್ಮೀರದಲ್ಲಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಕಾಶ್ಮೀರ ವಾಣಿಜ್ಯ ಮತ್ತು ಕೈಗಾರಿಕೆ ಮಂಡಳಿಯ ಪ್ರಾಥಮಿಕ ವರದಿ ತಿಳಿಸಿದೆ.