ಯುಪಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಮಹಿಳೆಯರಿಗೆ ಶೇ.40 ರಷ್ಟು ಟಿಕೆಟ್ ವಿತರಣೆ : ಪ್ರಿಯಾಂಕಾ ಗಾಂಧಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಕ್ನೋ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಶೇ.40% ರಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಘೋಷಿಸಿದ್ದಾರೆ.

2022 ರಲ್ಲಿ ಉತ್ತರ ಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯ ನಿಮಿತ್ತವಾಗಿ ಯುಪಿಯ ಉಸ್ತುವಾರಿ ವಹಿಸಿಕೊಂಡು ಸನ್ನದ್ಧರಾದ ಪ್ರಿಯಾಂಕಾ ಗಾಂಧಿ ಇಂದು ಲಕ್ನೋದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಘೋಷಣೆ ಮಾಡಿದ್ದಾರೆ.

“ಕಾಂಗ್ರೆಸ್ ಪಕ್ಷವು ರಾಜ್ಯದ ಒಟ್ಟು ಚುನಾವಣಾ ಟಿಕೆಟ್‌ಗಳಲ್ಲಿ 40% ಪ್ರತಿಶತದಷ್ಟು ಮಹಿಳೆಯರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ ಹಾಗೂ ಈ ಟಿಕೆಟ್‌ಗಳನ್ನು ಅರ್ಹತೆಯ ಆಧಾರದ ಮೇಲೆ ನೀಡಲಾಗುವುದು, ಕೇವಲ ಜಾತಿ ಅಥವಾ ಧರ್ಮದ ಆಧಾರದ ಮೇಲೆ ನೀಡಲಾಗುವುದಿಲ್ಲ” ಎಂದು ಪ್ರಿಯಾಂಕಾ ಗಾಂಧಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ದೇಶ ಮತ್ತು ಸಮಾಜದ ಪ್ರಗತಿಯಲ್ಲಿ ಮಹಿಳಾ ಶಕ್ತಿಯು ಪ್ರಮುಖ ಪಾತ್ರವನ್ನು ಹೊಂದಿದೆ, ನಾವು ಆ ಪಾತ್ರಕ್ಕೆ ರಾಜಕೀಯ ಪಾಲು ನೀಡುವ ಮೂಲಕ ಅವರನ್ನು ಸಬಲಗೊಳಿಸುತ್ತೇವೆ. ಮಹಿಳಾ ಸಬಲೀಕರಣದ ಭರವಸೆಯನ್ನು ಕಾಂಗ್ರೆಸ್ ಪೂರೈಸಲಿದೆ. ಮಹಿಳಾ ಶಕ್ತಿಯು ರಾಜಕೀಯ ಹಕ್ಕನ್ನು ಪಡೆಯಲಿದೆ” ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಬಹುಮತ ಹೊಂದಿರುವ ಭಾರತೀಯ ಜನತಾ ಪಾರ್ಟಿ (ಬಿಜೆಪಿ) 2017 ರ ಚುನಾವಣೆಯಲ್ಲಿ 312 ಸ್ಥಾನಗಳನ್ನು ಗೆಲ್ಲುವ ಮೂಲಕ ಜಯಗಳಿಸಿತ್ತು. ಸಮಾಜವಾದಿ ಪಕ್ಷ (ಎಸ್‌ಪಿ) 47 ಸ್ಥಾನಗಳನ್ನು ಮತ್ತು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) 19 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ ಕೇವಲ ಏಳು ಸ್ಥಾನಗಳಲ್ಲಿ ಗೆಲುವು ಸಾಧಿಸಿತು. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಪಕ್ಷ ಸಂಘಟಿಸಿ ಸಮಿತಿಗಳನ್ನು ರಚಿಸಲು ಸೂಚಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು