ಸಹಾಯಕ ಮಾಡಿದ ಹತ್ಯೆಯನ್ನು ಸಮರ್ಥಿಸಿಕೊಂಡ ಉತ್ತರ ಪ್ರದೇಶದ ಬಿಜೆಪಿ ಶಾಸಕ

bjp
Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಖನೌ(16/10/2020):  ನ್ಯೂಟನ್‌ ನಿಯಮವನ್ನು ಉಲ್ಲೇಖಿಸಿ ತಮ್ಮ ಸಹಾಯಕ ಮಾಡಿದ ಹತ್ಯೆಯನ್ನು ಉತ್ತರ ಪ್ರದೇಶದ ಬಿಜೆಪಿ ಶಾಸಕರೊಬ್ಬರು ಸಮರ್ಥಿಸಿಕೊಳ್ಳುವ ಮೂಲಕ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

‘ಪ್ರತಿಯೊಂದು ಕ್ರಿಯೆಗೂ ಪ್ರತಿಕ್ರಿಯೆ ಇದ್ದೇ ಇರುತ್ತದೆ’ ಎಂಬುದು ನ್ಯೂಟನ್‌ನ ಚಲನೆಯ ಮೂರನೇ ನಿಯಮ. ಈ ನಿಯಮವನ್ನು ಪ್ರಸ್ತಾಪಿಸಿ ತಮ್ಮ ಸಹಾಯಕ ಮಾಡಿದ ಹತ್ಯೆಯನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಸಹಜ ಘಟನೆ ಎಂಬಂತೆ ಬಿಂಬಿಸಿದ್ದಾರೆ.

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ದುರ್ಜನ್‌ಪುರ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿಗಳ ಹಂಚಿಕೆ ಕುರಿತು ಗುರುವಾರ ಅಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ನಡೆದ ವಾಗ್ವಾದದಲ್ಲಿ ಶಾಸಕರ ಸಹಾಯಕ ಧೀರೇಂದ್ರ ಸಿಂಗ್, ತನ್ನ ಪ್ರತಿಸ್ಪರ್ಧಿ ಜೈಪ್ರಕಾಶ್ ಪಾಲ್ ಎನ್ನುವವರ ಮೇಲೆ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿದ್ದನು.  ಇದನ್ನು ಶಾಸಕ ಸುರೇಂದ್ರ ಸಿಂಗ್ ಸಮರ್ಥಿಸಿಕೊಂಡಿದ್ದು, ಧೀರೇಂದ್ರ ಗುಂಡು ಹಾರಿಸಿದ್ದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು