ಉಪಚುನಾವಣೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ : ಸಿದ್ದರಾಮಯ್ಯ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಕೊಪ್ಪಳ: ಬೆಳಗಾವಿ ಲೋಕಸಭೆ ಕ್ಷೇತ್ರ ಸೇರಿ ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭೆ ಉಪಚುನಾವಣೆ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎಂದು ಪ್ರತಿಪಕ್ಷ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಚಿಲ್ಲರೆ ರಾಜಕೀಯ ಕಾಂಗ್ರೆಸ್ ಮಾಡುವುದಿಲ್ಲ, ಬಿಜೆಪಿ ಮಾಡುತ್ತದೆ, ಚಿಲ್ಲರೆ ರಾಜಕೀಯ ಮಾಡಿದ್ದು ಏನಾದರೂ ಸಾಕ್ಷಿ ಇವೆಯೇ ? ಪ್ರಶ್ನಿಸಿದರು.
ಇದೇ ಸಂದರ್ಭದಲ್ಲಿ ನಾನು ಸಿಡಿ ವಿಚಾರವಾಗಿ ನಾನು ಮಾತನಾಡಲ್ಲ. ಆದ್ರೆ, ನ್ಯಾಯಯುತವಾಗಿ ತನಿಖೆ ಮಾಡಬೇಕಿದೆ. ಸಂತ್ರಸ್ತೆ ಹೇಳಿದ ಮೇಲೆ ಎಸ್​ಐಟಿ ಅದನ್ನ ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಒತ್ತಾಯಿಸಿದರು.

ಸಿಡಿ ಪ್ರಕರಣದಲ್ಲಿ ಮಾಜಿ ಸಚಿವ ಸುಧಾಕರ್ ಹೆಸರು ಪ್ರಸ್ತಾಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಸುಧಾಕರ್ ನನಗೂ ಅದಕ್ಕೂ ಸಂಬಂಧ ಇಲ್ಲ, ಸೂಕ್ತ ತನಿಖೆ ನಡೆಸಿ ತಪ್ಪಿಸ್ಥರಿಗೆ ಶಿಕ್ಷೆಯಾಗಬೇಕು ಎಂದು ಅವರು ಆಗ್ರಹಿಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು