ಬಸವಕಲ್ಯಾಣ, ಮಸ್ಕಿ ಉಪಚುನಾವಣೆಯಲ್ಲಿ ಗೆದ್ದ ಇಬ್ಬರು ಶಾಸಕರು ಪ್ರಮಾಣ ವಚನ ಸ್ವೀಕಾರ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಇತ್ತೀಚೆಗೆ ನಡೆದ ಎರಡು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಯಲ್ಲಿ ವಿಜೇತರಾಗಿದ್ದ ಇಬ್ಬರು ನೂತನ ಶಾಸಕರು ಇಂದು ಅಧಿಕಾರ ಸ್ವೀಕರಿಸಿದರು. ನೂತನ ಶಾಸಕರಾದ ಬಸನಗೌಡ ತುರವೀಹಾಳ್ ( ಮಸ್ಕಿ ) ಹಾಗೂ ಶರಣು ಸಲಗರ (ಬಸವಕಲ್ಯಾಣ) ಅವರುಗಳಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಮಾಣ ವಚನ ಬೋಧಿಸಿದರು.

ಇಬ್ಬರು ಶಾಸಕರು ಸತ್ಯ ,ನ್ಯಾಯ ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.ಬಸವಕಲ್ಯಾಣ ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿ ಶಾಸಕ ಶರಣು ಸಲಗರ ಅವರಿಗೆ ಉಪಮುಖ್ಯಮಂತ್ರಿ ಲಕ್ಮಣ್ ಸವದಿ, ಸಚಿವ ಪ್ರಭು ಚವ್ಹಾಣ, ಬೀದರ್ ಲೋಕಸಭಾ ಕ್ಷೇತ್ರದ ಸದಸ್ಯ ಭಗವಂತ ಖೂಬಾ ಹಾಗೂ ಕುಟುಂಬದ ಸದಸ್ಯರು ಸೇರಿದಂತೆ ಮತ್ತಿತರರು ಸಾಥ್ ನೀಡಿದರು.

ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಶರಣು ಸಲಗರ ಅವರು ದಿವಂಗತ ಮಾಜಿ ಶಾಸಕ ನಾರಾಯಣರಾವ್ ಅವರ ಪತ್ನಿ ಮಾಲಾ ನಾರಾಯಣರಾವ್ ಅವರನ್ನು (ಕಾಂಗ್ರೆಸ್ ಅಭ್ಯರ್ಥಿ) ಪರಭಾವಗೊಳಿಸಿದ್ದರು. 20 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಶರಣು ಸಲಗರ ಪ್ರಥಮ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.

ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವೇಗೌಡ ತುರವಿಹಾಳ್ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್ ಅವರನ್ನು ಸೋಲಿಸಿ ಗೆಲುವಿನ ನಗೆ ಬೀರಿದ್ದರು. ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆದಿತ್ತು. ಬಿಜೆಪಿ – ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು, ರಾಜ್ಯ ರಾಜಕೀಯದಲ್ಲಿ ಎರಡೂ ಕ್ಷೇತ್ರದ ಉಪಚುನಾವಣೆ ಭಾರಿ ಚರ್ಚೆ ನಡೆದಿತ್ತು. ಆದರೆ ಮಸ್ಕಿ ಕ್ಷೇತ್ರದ ಜನರು ಕಮಲ ಬಿಟ್ಟು ‘ಕೈ’ ಹಿಡಿದ ಕಾರಣ ಬಿಜೆಪಿಗೆ ಭಾರೀ ಮುಖಭಂಗವಾಗಿತ್ತು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು