ಉಪಚುನಾವಣೆಯಲ್ಲಿ ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ: ಈಶ್ವರ ಖಂಡ್ರೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ಆಡಳಿತ ಬೇಸತ್ತಿರುವ ಜನರು ಉಪಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ಕಾರ್ಯವೈಖರಿಯಿಂದ ದೇಶ ಮತ್ತು ರಾಜ್ಯದ ಜನತೆ ರೋಸಿ ಹೋಗಿದ್ದಾರೆ ಎರಡೂ ಸರ್ಕಾರಗಳು ತೋಲಗಿದರೆ ಸಾಕಪ್ಪ ಎನ್ನುತ್ತಿದ್ದಾರೆ.

ಉಪಚುನಾವಣೆಗೆ ಕಾಂಗ್ರೆಸ್ ಸಂಪೂರ್ಣ ಸಜ್ಜಾಗಿದೆ ಬಸವಕಲ್ಯಾಣ ಉಪಚುನಾವಣೆಗೆ ನಾವು ನಮ್ಮ ಅಭ್ಯರ್ಥಿಯನ್ನು ಘೋಷಿಸಿದ್ದೇವೆ ಮತದಾರರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಬಸವಕಲ್ಯಾಣ ಕ್ಷೇತ್ರದಲ್ಲಿ 25,000 ಎಕರೆ ಒಣ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಏತ ನೀರಾವರಿ ಯೋಜನೆ ನೆನೆಗುದಿಗೆ ಬಿದ್ದಿರುವುದು,ರೈತರು ಮತ್ತು ಜನರು ಎದುರಿಸುತ್ತಿರುವ ಸಮಸ್ಯೆಗಳು ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಹಾಗೂ ದಿನಬಳಕೆಯ ವಸ್ತುಗಳು ಬೆಲೆ ಏರಿಕೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವೈಫಲ್ಯತೆಗಳು ನಮ್ಮ ಚುನಾವಣೆ ಅಸ್ತ್ರಗಳಾಗಿವೆ.
ಬಸವಕಲ್ಯಾಣ, ಮಸ್ಕಿ, ಬೆಳಗಾವಿ ಉಪಚುನಾವಣೆಯಲ್ಲಿ ಕಾಂಗ್ರೆಸ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಈಶ್ವರ್ ಖಂಡ್ರೆ ಭರವಸೆ ವ್ಯಕ್ತಪಡಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು