ಡೆಹ್ರಾಡೂನ್(13/11/2020): ಮುಖ್ಯಮಂತ್ರಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರು ಸಲ್ಲಿಸಿದ ಮಾಜಿ ಸಚಿವನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಿದ ಘಟನೆ ನಡೆದಿದೆ.
ಉತ್ತರಾಖಂಡದಲ್ಲಿ ಈ ಘಟನೆ ನಡೆದಿದ್ದು, ಮಾಜಿ ಸಚಿವ ಹಾಗೂ ಹಾಲಿ ಶಾಸಕರಾದ ಲಖಿ ರಾಮ್ ಜೋಶಿ ಮುಖ್ಯಮಂತ್ರಿ ವಿರುದ್ಧ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದು ದೂರು ಸಲ್ಲಿಸಿದವರು.
ಅವರ ತಮ್ಮ ಪತ್ರದಲ್ಲಿ ‘ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರು ಪಕ್ಷದ ಮೌಲ್ಯಕ್ಕೆ ಧಕ್ಕೆತರುವ ಕೆಲಸ ಮಾಡುತ್ತಿದ್ದಾರೆ. ಕಪ್ಪು ಹಣ ಸಂಗ್ರಹಿಸುತ್ತಿದ್ದಾರೆ. ಅವರ ವಿರುದ್ಧ ಸಿಬಿಐ ತನಿಖೆ ನಡೆಸಲು ಕೋರ್ಟ್ ಆದೇಶಿಸಿದೆ. ಅವರಿಂದಾಗಿ ಪಕ್ಷಕ್ಕೆ ಕೆಟ್ಟ ಹೆಸರು ಬಂದಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.