ಉತ್ತರಾಖಂಡ ದುರಂತದಲ್ಲಿ ಕಾಣೆಯಾದ 136 ಮಂದಿ ಮೃತಪಟ್ಟಿದ್ದಾರೆಂದು ಘೋಷಣೆ

utharakhand
Share on facebook
Share on twitter
Share on linkedin
Share on whatsapp
Share on telegram
Share on email
Share on print

ಚಮೋಲಿ(23-02-2021):ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟ ಬಳಿಕ ಉಂಟಾದ ಪ್ರವಾಹದಲ್ಲಿ ನಾಪತ್ತೆಯಾಗಿದ್ದ 136 ಮಂದಿಯನ್ನು ಮೃತಪಟ್ಟಿದ್ದಾರೆಂದು ಉತ್ತರಾಖಂಡ ಆರೋಗ್ಯ ಇಲಾಖೆ ತಿಳಿಸಿದೆ.

ದುರಂತದಲ್ಲಿ ಕಾಣೆಯಾದ 204 ಮಂದಿಯಲ್ಲಿ ಈಗಾಗಲೇ 69 ಮೃತದೇಹಗಳನ್ನು ರಕ್ಷಣಾ ಪಡೆಯ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.136 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವವರನ್ನು ಈಗ ಅಧಿಕಾರಿಗಳು ಮೃತಪಟ್ಟಿದ್ದಾರೆಂದು ಘೋಷಿಸಿದ್ದಾರೆ.

ರಾಜ್ಯ ಆರೋಗ್ಯ ಕಾರ್ಯದರ್ಶಿ ಅಮಿತ್ ನೇಗಿ ಈ ಕುರಿತು ಅಧಿಸೂಚನೆಯನ್ನು ಹೊರಡಿಸಿ ನಾಪತ್ತೆಯಾದವರು ಕುಟುಂಬಕ್ಕೆ ಮರಣ ಪ್ರಮಾಣ ಪತ್ರವನ್ನು ಹಸ್ತಾಂತರಿಸಲು ಸೂಚಿಸಿದ್ದಾರೆ.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು