ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥಗೆ ಕೊರೊನಾ ಸೋಂಕು

Share on facebook
Share on twitter
Share on linkedin
Share on whatsapp
Share on telegram
Share on email
Share on print

ಲಖನೌ : ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಕೋವಿಡ್ ಸೊಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್, ನನಗೆ ಕೊರೊನಾ ರೋಗದ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿದಾಗ ವರದಿಯಲ್ಲಿ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ನಾನು ಸ್ವಯಂ ಐಸೋಲೇಷನ್ ಗೆ ಒಳಗಾಗಿದ್ದೇನೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿದ್ದೇನೆ, ನನ್ನ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ್ ಅವರು ಎಪ್ರಿಲ್ 5 ಕೊರೊನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದರು, ಆದರೂ ಇಂದು ಕೊರೊನಾ ದೃಢಪಟ್ಟಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು