ಒಲ್ಲದ ಮನಸ್ಸಿನಿಂದ ಕಠಿಣ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ : ಸಚಿವ ಡಾ.ಸುಧಾಕರ್

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ವೈಜ್ಞಾನಿಕ ನೆಲೆಗಟ್ಟಿಯಲ್ಲಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ತೆಗೆದುಕೊಂಡಿರುವ ಆಡಳಿತಾತ್ಮಕ ನಿರ್ಧಾರವಾಗಿದ್ದು ಇದನ್ನು ರಾಜಕೀಯ ಅಥವಾ ಇನ್ಯಾವುದೇ ದೃಷ್ಟಿಯಿಂದ ಪರಿಗಣಿಸಬಾರದು ಆರೋಗ್ಯ ಸಚಿವ ಡಾ.ಸುಧಾಕರ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

 

ಈ ಕುರಿತು ಟ್ವೀಟ್ ಮಾಡಿರುವ ಡಾ.ಸುಧಾಕರ್

ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಕೆಲ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ.

ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟದ ಸದಸ್ಯರು, ತಾಂತ್ರಿಕ ಸಲಹಾ ಸಮಿತಿಯ ತಜ್ಞರು, ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಎಲ್ಲಾ ಆಯಾಮಗಳನ್ನು ಪರಿಗಣಿಸಿ ರಾಜ್ಯದ ಜನರ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

“ಕಳೆದ ವರ್ಷದ ಲಾಕ್ ಡೌನ್ ಮತ್ತು ನಂತರದ ನಿರ್ಬಂಧಗಳಿಂದ  ಚಿತ್ರರಂಗ ಸೇರಿದಂತೆ ಅನೇಕ ಉದ್ದಿಮೆ, ವ್ಯಾಪಾರ, ವಹಿವಾಟುಗಳಿಗೆ ತೊಂದರೆ ಆಗಿರುವುದರ ಬಗ್ಗೆ ಸರ್ಕಾರಕ್ಕೆ ಅರಿವಿದೆ, ಕಳಕಳಿಯೂ ಇದೆ. ಆದರೆ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಈ ಕಠಿಣ ನಿರ್ಧಾರ ತೆಗೆದುಕೊಳ್ಳುವ ಪರಿಸ್ಥಿತಿ ಮತ್ತೆ ಎದುರಾಗಿದೆ. ಈಗ ಲಸಿಕೆ ಸಹ ಲಭ್ಯವಿರುವುದರಿಂದ ಹೆಚ್ಚು ಹೆಚ್ಚು ಮಂದಿ ಲಸಿಕೆ ಪಡೆದು, ಕೆಲವು ದಿನಗಳ ಕಾಲ ಕಠಿಣ ನಿಯಮಗಳನ್ನು ಪಾಲಿಸಿ ನಿಮ್ಮೆಲ್ಲರ ಸಹಕಾರದಿಂದ ಪ್ರಕರಣಗಳು ಕಡಿಮೆಯಾದರೆ ಮತ್ತೆ ಎಂದಿನಂತೆ ಪೂರ್ಣ ಪ್ರಮಾಣದಲ್ಲಿ ಚಟುವಟಿಕೆಗಳನ್ನು ಪುನರಾರಂಭಿಸಬಹುದು ಡಾ.ಸುಧಾಕರ್ ಸಾರ್ವಜನಿಕರಿಗೆ ವಿನಂತಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು