ವರವರ ರಾವ್ ಗೆ 6 ತಿಂಗಳ ರಿಲೀಫ್ ನೀಡಿದ ಬಾಂಬೆ ಹೈಕೋರ್ಟ್

varavara rao
Share on facebook
Share on twitter
Share on linkedin
Share on whatsapp
Share on telegram
Share on email
Share on print

ಮುಂಬೈ(22-02-2020): ಅನಾರೋಗ್ಯದ ಹಿನ್ನೆಲೆಯಲ್ಲಿ ಕವಿ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತ ವರವರ ರಾವ್ ಅವರಿಗೆ ಆರು ತಿಂಗಳ ಜಾಮೀನು ನೀಡಿ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ.

ಆದೇಶದ ವೇಳೆ ಎಲ್ಗರ್ ಪರಿಷತ್ ಪ್ರಕರಣದಲ್ಲಿ ಕವಿ ತನ್ನ ವಿರುದ್ಧದ ಆರೋಪಗಳನ್ನು ಆಲಿಸುತ್ತಿರುವ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನ್ಯಾಯಾಲಯದ ವ್ಯಾಪ್ತಿಯಲ್ಲಿ ಉಳಿಯಬೇಕು ಎಂದು ನ್ಯಾಯಾಲಯ ಹೇಳಿದೆ.

ಅನಾರೋಗ್ಯದ ಕಾರಣದಿಂದ ರಾವ್ ಅವರನ್ನು ಕಳೆದ ವರ್ಷ ಜೈಲಿನಿಂದ ಮುಂಬೈನ ನಾನಾವತಿ ಆಸ್ಪತ್ರೆಗೆ  ದಾಖಲಿಸಲಾಗಿತ್ತು. ಎಲ್ಗರ್ ಪರಿಷತ್ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಅವರಿಗೆ ಜಾಮೀನು ನೀಡಲಾಗಿದೆ. 2017ರ ಡಿಸೆಂಬರ್ 31ರಂದು ಪುಣೆಯಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಕೊರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ 9 ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು