ಮಾಜಿ ಸಚಿವ ವಿನಯ್ ಕುಲಕರ್ಣಿ ಅರೆಸ್ಟ್

vinay kulkarni
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(05-11-2020): ಜಿ.ಪಂ. ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

2016ರ ಜೂನ್ 15ರಂದು ನಡೆದಿದ್ದು ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದ ವಿಚಾರಣೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆಯಾಗಿದೆ ಎಂದು ತಿಳಿದು ಬಂದಿದೆ.

ಧಾರವಾಡದ ಬಾರಾಕೊಟ್ರಿ ಪ್ರದೇಶದಲ್ಲಿನ ಮನೆಯಿಂದ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದು ಉಪ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

2016ರಲ್ಲಿ ಯೋಗೇಶ್ ಗೌಡ ಕೊಲೆ ನಡೆದಿತ್ತು. ಆಗ ವಿನಯ್ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದರು.

 

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು