ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ಕಸ್ಟಡಿಗೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

 

ಧಾರವಾಡ(06/11/2020) : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗಾಗಿ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿ ಧಾರವಾಡದ 32ನೆ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ.

ನ್ಯಾಯಾಧೀಶೆ ಎಚ್.ಪಂಚಾಕ್ಷರಿ ಅವರಿದ್ದ ನ್ಯಾಯಪೀಠವು ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ಸಿಬಿಐ ಕಸ್ಟಡಿಗೆ ನೀಡುವ ಕುರಿತ ಅರ್ಜಿ ವಿಚಾರಣೆ ನಡೆಸಿದ ಈ ಆದೇಶ ಹೊರಡಿಸಿದೆ.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಗುರುವಾರ ಬಂಧಿಸಲಾಗಿತ್ತು. ಇಂದು ಸಿಬಿಐ ಮೂರು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಧಾರವಾಡದ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ವಿನಯ್ ಕುಲಕರ್ಣಿ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು.

ಇಂದು ಬೆಳಗ್ಗೆ ವಕೀಲರ ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಮಧ್ಯಾಹ್ನಕ್ಕೆ ತೀರ್ಪು ಕಾಯ್ದಿರಿಸಿದ್ದರು. ಬಳಿಕ ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿರುವ ತೀರ್ಪನ್ನು ಪ್ರಕಟಿಸಿದರು.

 

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು