ವಿಶ್ವ ಆರೋಗ್ಯ ದಿನ : ಕೊರೊನಾ ವಿರುದ್ಧ ಹೋರಾಡಲು ದೇಶದ ಜನತೆಗೆ ಮೋದಿ ಕರೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ನವದೆಹಲಿ: ವಿಶ್ವ ಆರೋಗ್ಯ ದಿನಾಚರಣೆಯ ನಿಮಿತ್ತವಾಗಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೊರೊನಾ ನಿಯಮ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕೋವಿಡ್‌ 19 ವಿರುದ್ಧ ಹೋರಾಡಲು ಮುಂದಾಗಬೇಕು ಎಂದು ಕರೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿಗಳು
ಕಳೆದ ಮೂರು ದಿನಗಳಲ್ಲಿ ದೇಶದಲ್ಲಿ 1 ಲಕ್ಷಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸೋಂಕಿನ ವಿರುದ್ಧ ಹೋರಾಡಲು ಸಾರ್ವಜನಿಕರು ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸೇರಿದಂತೆ ಕೋವಿಡ್ 19 ವಿರುದ್ಧದ ಹೋರಾಟಕ್ಕೆ ರೂಪಿಸಿರುವ ಶಿಷ್ಟಾಚಾರಗಳನ್ನು ಅನುಸರಿಸಬೇಕು ಎಂದು ಪ್ರಧಾನಿ ಹೇಳಿದ್ದಾರೆ.

ವಿಶ್ವ ಆರೋಗ್ಯ ದಿನಚಾರಣೆ, ನಮ್ಮ ಭೂಮಿ ಆರೋಗ್ಯವನ್ನು ಕಾಪಾಡಲು ಹಗಲು ರಾತ್ರಿ ಶ್ರಮಿಸುತ್ತಿರುವ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸುವ ಮತ್ತು ಅವರ ಕಾರ್ಯಕ್ಕೆ ಮೆಚ್ಚಿಗೆ ಸೂಚಿಸುವ ದಿನವಾಗಿದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಆರೋಗ್ಯ ರಕ್ಷಣೆಯಲ್ಲಿ ಸಂಶೋಧನೆ ಮತ್ತು ಹೊಸತನಗಳನ್ನು ಬೆಂಬಲಿಸುವ ನಮ್ಮ ಬದ್ಧತೆಯನ್ನು ಪುನರುಚ್ಚರಿಸುವ ದಿನವೂ ಇದಾಗಿದೆ ಎಂದು ಮೋದಿ ಟ್ವಿಟ್ಟರ್ ನಲ್ಲಿ ಉಲ್ಲೇಖಿಸಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು