ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರಕಿದೆ.

ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಇಂದು ಬೆಳಗ್ಗೆ 8.26ರ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ನಿ ಚನ್ನಮ್ಮ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಡಾ.ಸುಧಾಕರ್, ಸಹಿತ ಹಲವರು ಉಪಸ್ಥಿತರಿದ್ದರು.

ಇಂದು ಸಂಜೆ ಆರು ಗಂಟೆಗೆ ಅರಮನೆ ಮುಂಭಾಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ.

ಕೋವಿಡ್ ಮಾರ್ಗಸೂಚಿ ಅನ್ವಯ ದಸರಾ ಮಹೋತ್ಸವ ಕಾರ್ಯಕ್ರಮದಲ್ಲಿ ಈ ಬಾರಿ ಐನ್ನೂರು ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಬಿಕ್ಕಟ್ಟಿನ ಕಾರಣದಿಂದ ಈ ಸಲ ಸರಳವಾಗಿ ಮೈಸೂರು ದಸರಾ ಮಹೋತ್ಸವ ನಡೆಯಲಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು