ಬೆಂಗಳೂರು(29-10-2020): ಕೊರೊನಾ ಸೋಂಕಿತರಿಗೂ ಆರ್.ಆರ್. ನಗರ ಕ್ಷೇತ್ರದಲ್ಲಿ ಮತದಾನಕ್ಕೆ ಅವಕಾಶವನ್ನು ನೀಡಲಾಗಿದೆ.
ಆರ್.ಆರ್. ನಗರ ಕ್ಷೇತ್ರದಲ್ಲಿ 10 ಸಾವಿರಕ್ಕೂ ಅಧಿಕ ಕೋವಿಡ್ ಸೋಂಕಿತರಿದ್ದು, ಉಪಚುನಾವಣೆಯಲ್ಲಿ ಮತ ಚಲಾವಣೆಗೆ ಅವರಿಗೆ ಅವಕಾಶವನ್ನು ನೀಡಲಾಗುತ್ತಿದೆ. ಕೋವಿಡ್ ಸೋಂಕಿತರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಮುಂದಾಗಿದೆ.
ಆಂಬ್ಯುಲೆನ್ಸ್ ಮೂಲಕ ಸೋಂಕಿತರನ್ನು ಮತಗಟ್ಟೆಗೆ ಕರೆತಂದು ಮತದಾನಕ್ಕೆ ಅವಕಾಶವನ್ನು ನೀಡಲಾಗುತ್ತದೆ. ಮತಗಟ್ಟೆ ಸಿಬ್ಬಂದಿಗಳಿಗೆ ಕೂಡ ಪಿಪಿಇ ಕಿಟ್ ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗುತ್ತದೆ.