ನವದೆಹಲಿ(25-11-2020): ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಯುವ ವಿಭಾಗದ ಅಧ್ಯಕ್ಷ ವಹೀದ್ ಪರ್ರಾ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಪುಲ್ವಾಮಾದಿಂದ ಇತ್ತೀಚೆಗೆ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಪರ್ರಾ ಅವರನ್ನು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಗುಂಪಿನೊಂದಿಗೆ ಸಂಬಂಧದ ಆರೋಪದ ಮೇಲೆ ಸೋಮವಾರದಿಂದ ಎನ್ಐಎ ಕೇಂದ್ರ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿತ್ತು.
ದಕ್ಷಿಣ ಕಾಶ್ಮೀರದ ಪಿಡಿಪಿಯ ಪುನರುಜ್ಜೀವನಕ್ಕೆ ಶ್ರಮಿಸಿದ್ದ ವಹೀದ್ ಪರ್ರಾ ಬಂಧನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ದೃಢಪಡಿಸಿದೆ.