ಯಡಿಯೂರಪ್ಪ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸೂಚಿಸಿದ್ಯಾ?

bsy
Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು(29-11-2020): ಬಿಜೆಪಿಯ ಕರ್ನಾಟಕ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರನ್ನು ಬದಲಿಸಲು ಪಕ್ಷದ ಹೈಕಮಾಂಡ್ ಹೇಳುತ್ತಿದೆ ಎಂಬ ವರದಿಗಳನ್ನು ತಳ್ಳಿಹಾಕಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳಿನ್ ಕುಮಾರ್, ನಾಯಕತ್ವ ಬದಲಾವಣೆಯ ವಿಷಯವನ್ನು ಯಾರು ಎತ್ತಿದ್ದಾರೆ? ಇದನ್ನು ಯಾರು ಪ್ರಶ್ನಿಸಿದ್ದಾರೆ? ನಮ್ಮ ರಾಷ್ಟ್ರೀಯ ಅಧ್ಯಕ್ಷರು ಅಥವಾ ರಾಷ್ಟ್ರೀಯ ಪದಾಧಿಕಾರಿಗಳು ಅಥವಾ ಕೋರ್ ಕಮಿಟಿ ಸದಸ್ಯರು ಅಥವಾ ನಮ್ಮ ಶಾಸಕರು ಈ ವಿಷಯದಲ್ಲಿ ಮಾತನಾಡಿದ್ದಾರೆಯೇ? ಎಂದು ಕೇಳಿದ್ದಾರೆ.

ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಕಟೀಲ್ ಸ್ಪಷ್ಟಪಡಿಸಿದ್ದಾರೆ. ಕಳೆದ ಮೂರು ನಾಲ್ಕು ತಿಂಗಳುಗಳಿಂದ ಈ ವಿಷಯದಲ್ಲಿ ಊಹಾಪೋಹಗಳಿವೆ ಮತ್ತು ನಾನು ಇದನ್ನು ನಿರಂತರವಾಗಿ ಹೇಳುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ಗಮನಾರ್ಹವಾಗಿ, 77 ವರ್ಷ ವಯಸ್ಸಿನ ಯಡಿಯೂರಪ್ಪ ಅವರ ವಯಸ್ಸನ್ನು ಪರಿಗಣಿಸಿ ಬಿಜೆಪಿ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯನ್ನು ಮಾಡುತ್ತಿದೆ ಎಂಬ ವದಂತಿಗಳಿವೆ. ರಾಜ್ಯ ಬಿಜೆಪಿ ಇಂತಹ ಊಹಾಪೋಹಗಳನ್ನು ಪದೇ ಪದೇ ತಿರಸ್ಕರಿಸಿದ್ದರೂ, ಪಕ್ಷದ ಹಿರಿಯ ಶಾಸಕ ಬಸನಗೌಡರಂತಹ ಕೆಲವರು ಸಿಎಂ ಬದಲಾವಣೆ ಬಗ್ಗೆ ಬಹಿರಂಗವಾಗಿ ಕಾಲೆಳೆಯುತ್ತಿದ್ದಾರೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು