ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 40 ಬಿಜೆಪಿ ಶಾಸಕರಿಂದ ಮುಖ್ಯಮಂತ್ರಿಯ ಭೇಟಿ

Share on facebook
Share on twitter
Share on linkedin
Share on whatsapp
Share on telegram
Share on email
Share on print

ಬೆಂಗಳೂರು : ಹಲವು ಹೇಳಿಕೆಗಳಿಂದ ವಾದ ವಿವಾದಕ್ಕೊಳಗಾಗುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ 40 ಬಿಜೆಪಿ ಶಾಸಕರು ಸೋಮವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

“ಯತ್ನಾಳ್ ರಿಗೆ ಎಷ್ಟೇ ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸುತ್ತಿದ್ದಾರೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಪರಿಸ್ಥಿತಿ ಸುಧಾರಿಸದೇ ಇದ್ದರೆ ವರಿಷ್ಠರಿಗೆ ದೂರು ನೀಡುತ್ತೇವೆ” ಎಂದು ಮುಖ್ಯಮಂತ್ರಿಗೆ ದೂರು ನೀಡುವ ಮೂಲಕ ಯತ್ನಾಳ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಮುಖ್ಯಮಂತ್ರಿಯವರಿಗೆ ಮುಜುಗರ ತರುತ್ತಿದ್ದಾರೆ. ಇದು ವಿರೋಧಿಗಳಿಗೆ ಅಸ್ತ್ರವಾಗಿದೆ. ಇದರಿಂದ ವಿಧಾನಸಭೆಯಲ್ಲೂ ಸರ್ಕಾರ ಇಕ್ಕಟ್ಟಿಗೆ ಸಿಲುಕುವಂತಾಗಿದೆ” ಎಂದು ಅಭಿಪ್ರಾಯಪಟ್ಟರು.ಅದರೊಟ್ಟಿಗೆ ತಮ್ಮ ತಮ್ಮ ಕ್ಷೇತ್ರದ ಬೆಳವಣಿಗೆಯ ವಿಚಾರದ ಬಗ್ಗೆಯೂ ಮಾತುಕತೆ ನಡೆಸಿದರು.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು