ಬೆಂಗಳೂರು(22-10-2020): ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಬಿಜೆಪಿ ನಾಯಕತ್ವ ಕುರಿತು ಮತ್ತು ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷವನ್ನು ಮುಜುಗರಕ್ಕೀಡಾಗುವಂತೆ ಮಾಡಿದ್ದರು.
ಈ ಕುರಿತು ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಮೊದಲಿಗೆ ಮಾತುಕತೆ ನಡೆಸುತ್ತೇವೆ. ನಂತರ ಯತ್ನಾಳ್ ಅವರನ್ನು ಕರೆಸಿ ಮಾತುಕತೆ ನಡೆಸಲಿದ್ದೇವೆ ಎಂದು ಸಿಟಿ ರವಿಯವರು ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಪಾಟೀಲ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲು ಕೇಂದ್ರ ಶಿಸ್ತುಕ್ರಮ ಸಮಿತಿಗೆ ಶೀಘ್ರದಲ್ಲೇ ಶಿಫಾರಸು ಮಾಡುತ್ತೇನೆಂದು ಹೇಳಿದ್ದಾರೆ.
ಇನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಕು ಎಂದು ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಆ ಹೇಳಿಕೆಗೆ ಯತ್ನಾಳ್ ಫೇಸ್ ಬುಕ್ ನಲ್ಲಿ ಪ್ರತಿಕ್ರಿಯಿಸಿದ್ದು, ಈಶ್ವರಪ್ಪನವರೇ ರಾಯಣ್ಣ ಬ್ರಿಗೇಡ್ ಮರೆತು ಹೋಯಿತೇ? ನಿಮ್ಮನ್ನು ಮೊದಲು ಉಚ್ಛಾಟಿಸಬೇಕು ಎಂದಿದ್ದಾರೆ.