ಯೋಗಿ ಆದಿತ್ಯನಾಥ್ ಚಿತ್ರವನ್ನು ಮಾರ್ಪಾಡು ಮಾಡಿ ಪೋಸ್ಟ್ ಮಾಡಿದ್ದ ಮುಸ್ಲಿಂ ಯುವಕನ ಬೇಲ್ ಅರ್ಜಿ ತಿರಸ್ಕಾರ

yogi adithyanath
Share on facebook
Share on twitter
Share on linkedin
Share on whatsapp
Share on telegram
Share on email
Share on print

ಉತ್ತರ ಪ್ರದೇಶ(19-01-2021): ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಚಿತ್ರವನ್ನು ಮಾರ್ಪಾಡು ಮಾಡಿ ಪೋಸ್ಟ್ ಮಾಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಡಿಸೆಂಬರ್ 4 ರಂದು ಬಂಧಿಸಲ್ಪಟ್ಟ ವ್ಯಕ್ತಿಯ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಸರ್ಕಾರದ ಪರ  ವಕೀಲ ಆಕಾಶ್ ಶರ್ಮಾ ಈ ಕುರಿತು ಮಾಹಿತಿಯನ್ನು ನೀಡಿದ್ದು, ನ್ಯಾಯಾಧೀಶ ರೋಹಿತ್ ಆರ್ಯ ಅವರು ಸಮೀರ್ ಅವರ ಮನವಿಯನ್ನು ತಿರಸ್ಕರಿಸಿದ್ದಾರೆ. ಆದಿತ್ಯನಾಥ್ ಅವರು ಮುಖ್ಯಮಂತ್ರಿ ಮಾತ್ರವಲ್ಲದೆ ಸಂತರೂ ಆಗಿದ್ದಾರೆ ಎಂದು ಹೇಳಿದ್ದಾರೆ.

ಆರೋಪಿ ಒಬ್ಬ ಸಂತನನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ನೋಯಿಸಿದ್ದಾನೆ ಎಂದು ಶರ್ಮಾ ಹೇಳಿದ್ದಾರೆ. ಸಮೀರ್  ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295 (ಎ) (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Like us:

ಪ್ರಮುಖ ಸುದ್ದಿಗಳು

ರಾಷ್ಟ್ರೀಯ ಸುದ್ದಿಗಳು