ಅಮರಾವತಿ(12/10/2020): ವೈಎಸ್ಆರ್ ಕಾಂಗ್ರೆಸ್ ನಾಯಕರು ನ್ಯಾಯಾಂಗದ ನಿಂದನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣವನ್ನು ಆಂಧ್ರಪ್ರದೇಶ ಹೈಕೋರ್ಟ್ ಸಿಬಿಐಗೆ ವಹಿಸಿ ಆದೇಶಿಸಿದೆ.
ಸಿಐಡಿ ಈ ಪ್ರಕರಣದ ತನಿಖೆ ನಡೆಸುತ್ತಿತ್ತು. ಆದರೆ, ಸಿಐಡಿ ತನಿಖೆಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ , ವೈಎಸ್ಆರ್ ಕಾಂಗ್ರೆಸ್ ನಾಯಕರನ್ನು ರಕ್ಷಿಸುವ ಸಲುವಾಗಿಯೇ ತನಿಖಾ ಸಂಸ್ಥೆಯು ಪ್ರಕರಣವನ್ನು ದಾಖಲಿಸಿಲ್ಲ ಎಂದು ಹೇಳಿದೆ.
ತಕ್ಷಣವೇ ಈ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಹೈಕೋರ್ಟ್ ಸಿಬಿಐಗೆ ಸೂಚಿಸಿದೆ. ವರದಿ ಸಲ್ಲಿಕೆಗೆ 8 ವಾರಗಳ ಗಡುವು ನೀಡಿದೆ.